ಕರಾವಳಿ

ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸಹಿತ ಐಪಿಎಸ್ ಅಧಿಕಾರಿಗಳ ವರ್ಗಾವಣೆ

Pinterest LinkedIn Tumblr

ಮಂಗಳೂರು: ರಾಜ್ಯದಲ್ಲಿ ಮತ್ತಷ್ಟು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಇಂದು ಆದೇಶಿಸಿದೆ.

ಬೆಂಗಳೂರು ವೈರ್‌ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ. ಕೆ.ಎಸ್.ಆರ್.ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್‌ಲೆಸ್ ಎಸ್.ಪಿಯಾಗಿ ವರ್ಗಾಯಿಸಲಾಗಿದೆ.

ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ಸಿಎಆರ್ ಡಿಸಿಪಿಯಿಂದ ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ಒಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

Comments are closed.