ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದು ಕಿಟಕಿಯ ಗಾಜುಗಳು ಚೂರಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿತ್ತು. ಈ ಬೆನ್ನಲ್ಲೇ ಗುರುವಾರ ಮತ್ತೊಂದು ಅವಘಡ ಸಂಭವಿಸಿದೆ.

ಡಿ.ಕೆ ಶಿವಕುಮಾರ್ ಬಂದಿಳಿದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್ನಲ್ಲಿ ಹುಲ್ಲಿನ ಮೇಲೆ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.
ಮೊನ್ನೆ ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಅದೃಷ್ಟವಶಾತ್ ಹೆಲಿಕಾಪ್ಟರ್ನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.
Comments are closed.