ಕರಾವಳಿ

ಬಿಜೆಪಿ ಅವಧಿಯ ಅಭಿವೃದ್ಧಿ ಕಾರ್ಯಗಳೇ ಗುರುರಾಜ ಗಂಟಿಹೊಳೆಯವರಿಗೆ ಶ್ರೀರಕ್ಷೆ: ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ

Pinterest LinkedIn Tumblr

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿ ಹೊಳಿ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಕ್ಷೇತ್ರದ ಎಲ್ಲಾ ಸಮುದಾಯದ ಜನರು ಬಿಜೆಪಿಯೊಂದಿಗಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ)

2018ರ ಚುನಾವಣೆಯಲ್ಲಿ ಗೆದ್ದಿರುವ ನಾನು ಶಾಸನಕನಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ನೂರಾರು ಕೋಟಿಗೂ ಅಧಿಕ ರೂಗಳಿಂದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಕಾರ್ಯವನ್ನು ಮಾಡಿದ್ದೇನೆ. 2018 ರಿಂದ ಈವರೆಗೂ ಕ್ಷೇತ್ರದಲ್ಲಿ 3000 ಕೋಟಿಗೂ ಅಧಿಕ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ.

ಮಾಜಿ ಶಾಸಕರ ನೆಲೆಯಲ್ಲಿ ಗುರುರಾಜ ಗಂಟಿಹೊಳೆಯವರೊಂದಿಗೆ ನಾವೆಲ್ಲರೂ ಇದ್ದೇವೆ. ಅವರ ಗೆಲುವಿಗೆ ಶ್ರಮಿಸಲಿದ್ದೇವೆ. ಕ್ಷೇತ್ರದಾದ್ಯಂತ ಅವರಿಗೆ ಮತ್ತು ಬಿಜೆಪಿಗೆ ಜನರು ನೀಡುತ್ತಿರುವ ಬೆಂಬಲವು ಖಂಡಿತ ಅವರ ಗೆಲುವಿಗೆ ಸಹಕಾರಿಯಾಗಲಿದೆ. ಅಭಿವೃದ್ಧಿ ಕಾರ್ಯ, ಹಿಂದುತ್ವ, ಯುವ ಚಿಂತನೆ, ಶೈಕ್ಷಣಿಕ, ಪ್ರವಾಸೋದ್ಯಮ, ಮೀನುಗಾರಿಕೆ, ಉದ್ಯೋಗ ಸೃಷ್ಟಿ, ಕೈಗಾರಿಕೆಗಳಿಗೆ ಉತ್ತೇಜನ ಸಹಿತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಗುರುರಾಜ ಗಂಟಿಹೊಳೆಯವರಲ್ಲಿ ದೂರದೃಷ್ಟಿಯ ಹಲವು ಚಿಂತನೆಗಳಿವೆ. ಅವುಗಳು ಅನುಷ್ಠಾನವಾದಲ್ಲಿ ಬೈಂದೂರು ಮಾದರಿ ಕ್ಷೇತ್ರವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಹಾಗೂ ಗುರುರಾಜ ಗಂಟಿಹೊಳೆ ಅವರೊಂದಿಗೆ ನಾವೆಲ್ಲರೂ ಇದ್ದೇವೆ ಎಂದು ಅವರು ತಿಳಿಸಿದ್ದಾರೆ.

Comments are closed.