ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಉಡುಪಿ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಪ್ರಥಮ ಸುತ್ತಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು 2700 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.


ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಚುನಾವಣೆ ನಡೆದಿದ್ದು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ, ಕಾರ್ಕಳ, ಕಾಪು ಮತ್ತು ಉಡುಪಿ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಅಜ್ಜರಕಾಡು ಸೈಂಟ್ ಸಿಸಿಲಿಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಗಿ ಭದ್ರತೆಯೊಂದಿಗೆ ಆರಂಭವಾಗಿದೆ. ಉಡುಪಿ ಎಸ್ಪಿ ಅಕ್ಷಯ್ ಮಚ್ಚಿಂದ್ರ ಹಾಕೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ, ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ, ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದರಾಜ್ ಕಾಂಚನ್, ಬಿಜೆಪಿ ಅಭ್ಯರ್ಥಿ ಯಶಪಾಲ ಸುವರ್ಣ, ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ. ಇನ್ನು ವಿವಿಧ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೊರಗಡೆ ನಿಂತು ಕುತೂಹಲದಿಂದ ಫಲಿತಾಂಶಕ್ಕಾಗಿ ನಿರೀಕ್ಷಿಸುತ್ತಿದ್ದಾರೆ.
Comments are closed.