ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶನಿವಾರ ರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ತಲುಪಿಸಿದ್ದಾರೆ.
ಈ ಕುರಿತು “ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಗೆದ್ದಿದ್ದರೆ, ಅಧಿಕಾರಕ್ಕೇರಿರುವ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಜೆಡಿಎಸ್ 19 ಸ್ಥಾನಗಳಲ್ಲಿ ಗೆದ್ದಿದೆ.
Comments are closed.