ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್ ನ್ನು ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು 1 ಕಿ.ಮೀ.ವರೆಗೆ ಚಲಾಯಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ.

ಹಳೇ ಮದ್ರಾಸ್ ರಸ್ತೆಯಲ್ಲಿ ನಡೆದಿರುವ ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಎಸಿಪಿ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆ ಪ್ರಯುಕ್ತ ಹಲಸೂರು ಉಪವಿಭಾಗದ ಎಸಿಸಿ ರಾಮಚಂದ್ರಪ್ಪ ಅವರು ಹಳೇ ಮದ್ರಾಸ್ ರಸ್ತೆಯಲ್ಲಿ ಕರ್ತವ್ಯದಲ್ಲಿದ್ದರು. ನಾಯಕರ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುತ್ತಿದ್ದರು.
ಚಲಿಸುತ್ತಿದ್ದ ಬಸ್‌ನ ಚಾಲಕ, ಏಕಾಏಕಿ ಮೂರ್ಛೆ ಬಿದ್ದು ಅಸ್ವಸ್ಥಗೊಂಡಿದ್ದು ಆರೋಗ್ಯ ಸಮಸ್ಯೆ ಅರಿತಿದ್ದ ಚಾಲಕ, ಮೂರ್ಛೆ ಬೀಳುವುದಕ್ಕೂ ಮುನ್ನ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿದ್ದರು.
ಸಹಾಯಕ್ಕೆ ಹೋಗಿದ್ದ ಎಸಿಪಿ ರಾಮಚಂದ್ರಪ್ಪ ಹಾಗೂ ಸಿಬ್ಬಂದಿ, ಚಾಲಕನನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದು ನಡುರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ ಏರಿದ ಎಸಿಪಿ ರಾಮಚಂದ್ರಪ್ಪ, 1 ಕಿ.ಮೀ.ವರೆಗೂ ಚಲಾಯಿಸಿದ್ದರು. ಸುರಕ್ಷಿತ ಸ್ಥಳದಲ್ಲಿ ಬಸ್ ನಿಲ್ಲಿಸಿದ್ದರು.
ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಎಸಿಪಿ ಅವರ ಚಾಲನೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ.
Comments are closed.