ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಿ ಎಸ್ಪಿ ಅಕ್ಷಯ್ ಎಂ. ಹಾಕೆ ಆದೇಶಿಸಿದ್ದಾರೆ.

ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾಯಿಸಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ತನಿಖಾಧಿಕಾರಿಯಾಗಿ ಮಾಡಬಾರದು ಎಂಬ ಆಗ್ರಹ ಕೇಳಿಬಂದಿತ್ತು. ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ. ಹೊಸ ತನಿಖಾಧಿಕಾರಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.
Comments are closed.