ಬೆಂಗಳೂರು: ಸೌಜನ್ಯಾ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಕನ್ನಡದ ನಟ ದುನಿಯಾ ವಿಜಯ್ ಹೇಳಿದ್ದಾರೆ.

ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ#Justiceforsoujanya pic.twitter.com/wlxF84dHY4
— Duniya Vijay (@OfficialViji) August 1, 2023
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.
“ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು” ಎಂದು ಭಗವಾನ್ ಬುದ್ಧನ ಹೇಳಿಕೆಯನ್ನೂ ಉಲ್ಲೇಖಿಸಿದ್ದಾರೆ. #Justiceforsoujanya ಎನ್ನುವ ಹ್ಯಾಶ್ಟ್ಯಾಗ್ ಬಳಸಿದ್ದಾರೆ.
Comments are closed.