ಕರಾವಳಿ

ಬೈಂದೂರು ವಿಧಾನಸಭಾ ಕ್ಷೇತ್ರದ ಟವರ್, ರೈಲು ಸಮಸ್ಯೆ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ

Pinterest LinkedIn Tumblr

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದರು.

ಈ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಮನವಿ ಮಾಡಿದ್ದಲ್ಲದೆ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿರುವ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ.

Comments are closed.