ಕರಾವಳಿ

ಉಪ್ಪುಂದದಲ್ಲಿ ದೋಣಿ ದುರಂತ; ಘಟನಾ ಸ್ಥಳಕ್ಕೆ ಸಚಿವ ಮಂಕಾಳ ವೈದ್ಯ ಭೇಟಿ, ಪರಿಹಾರ ಚೆಕ್ ಹಸ್ತಾಂತರ

Pinterest LinkedIn Tumblr

ಉಡುಪಿ: ತಾಲೂಕಿನ ಉಪ್ಪುಂದ ಸಮೀಪದ ಮಡಿಕಲ್ ಕರ್ಕಿಕಳಿ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ಘಟನಾ ಸ್ಥಳಕ್ಕೆ ಮಂಗಳವಾರ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕುಟುಂಬಿಕರಿಗೆ ಪರಿಹಾರದ ಚೆಕ್ ವಿತರಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಕೊಡೇರಿ ಬಂದರಿನ ಕಾಮಗಾರಿಗೆ ಅನುದಾನ ಒದಗಿಸುವ ಬಗ್ಗೆ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಮನವಿ ಸಲ್ಲಿಸಿದ್ದಾರೆ. ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಅನುದಾನ ಒದಗಿಸಿಲು ಸಿಎಂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರ ಬಂದರಿನ ಎರಡು ಭಾಗದಲ್ಲಿ ತಲಾ 250 ಮೀ. ಉದ್ದ ಬ್ರೇಕ್ ವಾಟರ್ ವಿಸ್ತರಿಸುವ ಕಾಮಗಾರಿ ಸಡೆಸಲಾಗುವುದು ಎಂದರು.

ಎರಡು ಕುಟುಂಬಗಳಿಗೆ ತಲಾ 6 ಲಕ್ಷ ರೂ ಪರಿಹಾರ
ಮೀನುಗಾರ ಸಂಕಷ್ಟ ಪರಿಹಾರ ನಿಧಿಯಿಂದ ಎರಡು ಕುಟುಂಬಗಳಿಗೆ ತಲಾ ಆರು ಲಕ್ಷ ರೂ ಪರಿಹಾರ ನೀಡಲಾಗಿದೆ. ಹಾನಿಗೀಡಾದ ದೋಣಿ ಹಾಗೂ ಬಲೆಗಳಿಗೆ ಸಮರ್ಪಕ ಪರಿಹಾರ ವಿತರಿಸಲಾಗುವುದು ಎಂದ ಅವರು ಘಟನೆ ನಡೆದು 24 ಗಂಟೆಯೊಳಗೆ ಪರಿಹಾರ ವಿತರಿಸಲಾಗಿದೆ ಎಂದರು.

ಕರಾವಳಿ ಭಾಗದ 320ಕಿ.ಮೀ ಉದ್ದದ ಕಡಲತೀರದ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕಾಗಿ ಈಗಾಗಲೇ ಸರ್ವೇಕಾರ್ಯ ನಡೆದಿದ್ದು, ಅದರ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಶ್ವತ ತಡೆಗೋಡೆ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದರು.

ಈ ಬಾರಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮತ್ಸ್ಯಾಶ್ರಯ ಯೋಜನೆಯಡಿ 100 ಮೀನುಗಾರಿಕಾ ಮನೆಗಳನ್ನು ನೀಡಲಾಗುವುದು ಎಂದ ಅವರು ಕರಾವಳಿ ಭಾಗದ ಮೀನುಗಾರರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಜಿ.ಪಂ. ಅಧ್ಯಕ್ಷ ಎಸ್. ರಾಜು ಪೂಜಾರಿ, ಮುಖಂಡರಾದ ಮದನಕುಮಾರ್, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬಿ.ಎಸ್. ಸುರೇಶ ಶೆಟ್ಟಿ, ದೀಪಕ್‌ಕುಮಾರ ಶೆಟ್ಟಿ, ಮೋಹನ ಪೂಜಾರಿ, ರಾಣಿಬಲೆ ಮೀನುಗಾರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ, ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಮೀನುಗಾರಿಕಾ ಹಾಗೂ ಬಂದರು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.