ಕುಂದಾಪುರ: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು ಎಂದು ಕುಂದಾಪುರದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಪ್ರಕರಣದ ಮರು ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಪತ್ತೆ ಮಾಡಿ ಬಂಧಿಸಿ, ಸೌಜನ್ಯಳಿಗೆ ಹಾಗೂ ನೊಂದ ಆಕೆ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಎಬಿವಿಪಿ ಒತ್ತಾಯಿಸಿದೆ. ಒಂದು ವೇಳೆ ರಾಜ್ಯ ಸರ್ಕಾರವು ಮರು ತನಿಖೆಗೆ ಆದೇಶಿಸದೆ ನ್ಯಾಯ ಒದಗಿಸುವಲ್ಲಿ ವಿಫಲವಾದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಈ ವೇಳೆ ಕುಂದಾಪುರ ಎಬಿವಿಪಿ ಘಟಕದ ಪ್ರಮುಖರು ಉಪಸ್ಥಿತರಿದ್ದರು.
Comments are closed.