ಉಡುಪಿ: ಕರಾವಳಿ ಜಿಲ್ಲೆಯ ಜನ ಶ್ರದ್ಧಾ-ಭಕ್ತಿಯಿಂದ ಆಚರಿಸುವಂತಹ ಹಬ್ಬ ನಾಗರಪಂಚಮಿ ಆಗಿದೆ. ಈ ಹಿನ್ನಲೆಯಲ್ಲಿ ನಾಗರಪಂಚಮಿ ದಿನ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

ಆಗಸ್ಟ್ 21 ಸೋಮವಾರದಂದು ನಾಗರ ಪಂಚಮಿಯ ವಿಶೇಷ ದಿನದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕುಟುಂಬಗಳು ಶ್ರೀ ನಾಗ ದೇವರ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವ ದೃಷ್ಠಿಯಿಂದ ಶಾಲಾ-ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.
Comments are closed.