ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

74 ವರ್ಷದ ಬ್ಯಾಂಕ್ ಜನಾರ್ದನ್ ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಹಲವು ಚಿತ್ರಗಳಲ್ಲಿ ಹಾಸ್ಯ ನಟರಾಗಿ, ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ನಾಡಿನಲ್ಲಿ ಜನಪ್ರಿಯರಾಗಿದ್ದಾರೆ. ಪ್ರಖ್ಯಾತ ಕನ್ನಡ ನಟರು ಅಭಿನಯಿಸಿದ ಸಿನಿಮಾ ಸಹಿತ ಕನ್ನಡದ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅಲ್ಲದೆ ಬ್ಯಾಂಕ್ ಜನಾರ್ಧನ್ ಧಾರಾವಾಹಿಗಳಲ್ಲಿ ಕೂಡ ನಟಿಸುತ್ತಿದ್ದಾರೆ.
Comments are closed.