ಕರಾವಳಿ

ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ ‘ಕನ್ನಡ’ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ

Pinterest LinkedIn Tumblr

ಉಡುಪಿ: ರಾಜ್ಯ ಸರ್ಕಾರದ ಸುತ್ತೋಲೆ ಹಾಗೂ ಅಧಿಸೂಚನೆಯಂತೆ ಕನ್ನಡ ಭಾಷೆಯನ್ನು ರಾಜ್ಯದ ಎಲ್ಲಾ ಹಂತಗಳಲ್ಲಿ ಸಂಪೂರ್ಣವಾಗಿ ಅನುಷ್ಠಾನ ಜಾರಿಗೊಳಿಸುವಂತೆ ಸೂಚಿಸಲಾಗಿದೆ.

ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್, ನಗರಸಭೆ, ಪಟ್ಟಣ ಪಂಚಾಯತ್ ಎಲ್ಲಾ ಅಧೀನ ಕಛೇರಿ, ಅಂಗಡಿ ಮುಗ್ಗಟ್ಟು, ಮಾರಾಟ ಮಳಿಗೆ, ಹೊಟೇಲ್, ಬ್ಯಾಂಕ್, ಕಂಪೆನಿಗಳಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಹೆಚ್ಚು ಎದ್ದು ಕಾಣುವ ಹಾಗೆ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Comments are closed.