ಕರಾವಳಿ

ಮಹಿಷಾ ದಸರಾ ವಿಚಾರ: ಉಡುಪಿ ಜಿಲ್ಲೆಯಲ್ಲಿ ಅ.14 ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6 ತನಕ ನಿಷೇಧಾಜ್ಞೆ- ಜಿಲ್ಲಾಧಿಕಾರಿ ಆದೇಶ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಮಹಿಷ ದಸರಾ ಆಚರಣೆಯ ಪರ, ವಿರೋಧ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್, ಅಳವಡಿಸುವುದು ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದನ್ನು ನಿಷೇಧಿಸಿ, ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಸೆಕ್ಷನ್ ಹಿನ್ನೆಲೆ ಘೋಷಣೆ ಕೂಗೂವುದು, ಭಾಷಣ ಮಾಡುವುದು, ಹಾಡು, ಗಾಯನದ ಮೂಲಕ ಪ್ರಚೋದಿಸುವುದು ಹಾಗೂ ಭಿತ್ತಿಪತ್ರ ಅಂಟಿಸುವಂತಿಲ್ಲ. ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ, ಪಟಾಕಿ ಸಿಡಿಸುವುದು, ಸ್ಪೋಟಕ ಒಯ್ಯುವುದಕ್ಕೂ ನಿರ್ಬಂಧ ಹೇರಲಾಗಿದೆ.

ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Comments are closed.