ಉಡುಪಿ: ಜಿಲ್ಲೆಯ ಹೆಬ್ರಿ ಸಮೀಪದ ಪೆರ್ಡೂರಿನ ವೃದ್ಧೆಯೊಬ್ಬರ ಚಿನ್ನದ ಸರವನ್ನು ದೋಚಿ ಪರಾರಿಯಾದ ಆರೋಪಿ ಪೆರ್ಡೂರಿನವನೇ ಆದ ಉಲ್ಲಾಸ್ ಶೆಟ್ಟಿ (48) ಎನ್ನುವಾತನನ್ನು ಪೊಲೀಸರು ಬಂಧಿಸಿದ್ದು ಸುಲಿಗೆ ಮಾಡಿದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪೆರ್ಡೂರು ಮುತ್ತೂರ್ಮೆ ನಿವಾಸಿ ಗಿರಿಜಾ ಶೆಟ್ಟಿ ಅವರ ಮನೆಯ ಹೊರಗಿನ ಬಟ್ಟೆ ಒಗೆಯುವ ಕಲ್ಲಿನ ಬಳಿ ಪಾತ್ರೆ ತೊಳೆಯುತ್ತಿರುವಾಗ ಅಪರಿಚಿತ ವ್ಯಕ್ತಿ ಗಿರಿಜಾ ಶೆಟ್ಟಿಯವರ ಮುಖಕ್ಕೆ ಬಟ್ಟೆಯನ್ನು ಮುಸುಕು ಹಾಕಿ ಅವರ ಕುತ್ತಿಗೆಯಲ್ಲಿದ್ದ ಸುಮಾರು 25 ಗ್ರಾಂ ತೂಕದ 88 ಸಾವಿರ ರೂ. ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯಡಕ ಪೊಲೀಸ್ ಠಾಣಾ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಪ್ರಕರಣ ದಾಖಲಾದ ಎರಡೇ ದಿನಗಳಲ್ಲಿ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್ ಪಿ.ಕೆ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್.ಪಿ.ಎಂ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿ ಮಂಜುನಾಥ ಮರಬದ, ಹಿರಿಯಡಕ ಠಾಣಾ ಸಿಬಂದಿಗಳು ಕಾರ್ಯಾಚರಣೆಯಲ್ಲಿದ್ದರು.
Comments are closed.