ಕರ್ನಾಟಕ

ಹುಲಿ ಉಗುರು ಕೇಸ್:‌ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ಗೆ ಷರತ್ತುಬದ್ಧ ಜಾಮೀನು ಮಂಜೂರು!

Pinterest LinkedIn Tumblr

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿಯಾಗಿದ್ದ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಅವರಿಗೆ ಜಾಮೀನು ಮಂಜೂರಾಗಿದೆ.

ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ. ನಾಲ್ಕು ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.

ವರ್ತೂರು ಸಂತೋಷ್​ ಹಳ್ಳಿಕಾರ್​ ತಳಿಯ ಹಸುಗಳ ಸಂರಕ್ಷಣೆ ಮಾಡುವ ಮೂಲಕ ಖ್ಯಾತಿ ಗಳಿಸಿದ್ದರು. ಅದೇ ಆಧಾರದಲ್ಲಿ ಅವರು ಬಿಗ್​ ಬಾಸ್​ಗೆ ಆಯ್ಕೆಯಾಗಿದ್ದರು. ಇನ್ನು ಬಿಗ್ ಬಾಸ್ ಮನೆಯಲ್ಲಿ ಸಂತೋಷ್ ಧರಿಸಿದ್ದ ಹುಲಿ ಉಗುರಿನ ಲಾಕೆಟ್​ ವೈರಲ್ ಆಗಿತ್ತು. ಹೀಗಾಗಿ ಅರಣ್ಯಾಧಿಕಾರಿಗಳು ಅಕ್ಟೋಬರ್ 22ರ ರಾತ್ರಿ ಬಿಗ್​ ಬಾಸ್​ ಮನೆಗೆ ಹೋಗಿ ಅವರನ್ನು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

 

Comments are closed.