ಕರ್ನಾಟಕ

ಪ್ರೀತಿಸಿ ಮದುವೆಯಾದ ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆಗೈದು ಎಸ್ಕೇಪ್ ಆದ ಪತಿ

Pinterest LinkedIn Tumblr

ಹಾಸನ: ತುಂಡು ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದವರು. ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿಯನ್ನೇ ಕೊಲೆಗೈದ ಆರೋಪಿ. ಜೀವನ್‌ ಮತ್ತು ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.

ಶನಿವಾರ ಸಂಜೆ ಮಾಡರ್ನ್ ಬಟ್ಟೆ ಧರಿಸಿ ಜ್ಯೋತಿ ಹೊರಗೆ ಹೊರಟಿದ್ದು ಜೀವನ್‌ ಇದನ್ನು ವಿರೋಧಿಸಿದ್ದ. ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನದ ಜೀವನ್‌ ಹಾಗೂ ಧಾರವಾಡದ ಜ್ಯೋತಿ ಅವರು ಪ್ರೀತಿಸಿ ಮದುವೆಯಾಗಿದ್ದರು. ಜ್ಯೋತಿ ಅವರು ಮಾಡರ್ನ್‌ ಉಡುಪುಗಳನ್ನು ಧರಿಸುವುದು ಜೀವನ್‌ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು ಎನ್ನಲಾಗಿದೆ.

 

 

Comments are closed.