ಕರಾವಳಿ

ಕುಂದಾಪುರದ ತೆಕ್ಕಟ್ಟೆಯಲ್ಲಿ ಆಭರಣದಂಗಡಿ ಕಳವಿಗೆ ಯತ್ನಿಸಿದ ಮುಸುಕುಧಾರಿಗಳ ತಂಡ..!

Pinterest LinkedIn Tumblr

ಕುಂದಾಪುರ: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್‌ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಡಿಸೆಂಬರ್ 21 ರಂದು ತೆಕ್ಕಟ್ಟೆ ಕೆನರಾ ಬ್ಯಾಂಕ್ ಬಳಿಯ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿರುವ ಮೀನಾಕ್ಷಿ ಫರ್ನಿಚರ್ ಶೋರೂಮ್, ಗೋಡೌನ್ ಮತ್ತು ಟೈಲರಿಂಗ್ ಅಂಗಡಿಯಲ್ಲಿ ಇತ್ತೀಚೆಗೆ ಕಳ್ಳತನಕ್ಕೆ ಯತ್ನಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ, ಜ್ಯುವೆಲ್ಲರಿ ಮಾಲೀಕರು ಪೊಲೀಸರಿಗೆ ದೂರು ದಾಖಲಿಸಿಲ್ಲ ಎನ್ನಲಾಗಿದೆ.

ಹೆದ್ದಾರಿ ಸಮೀಪವೇ ನಡೆದ ಈ ಕೃತ್ಯದ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Comments are closed.