ಲಖನೌ: ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಯು ಲಖನೌ ಗೋಮ್ತಿ ನಗರ್ ವಿಭೂತಿ ಖಂಡ್ ನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. ಎರಡು ಇಮೇಲ್ ಐಡಿಗಳನ್ನು ಬೆದರಿಕೆ ಪೋಸ್ಟ್‌ಗಳನ್ನು ಕಳುಹಿಸಲು ಬಳಸಲಾಗಿದೆ ಎಂದು ಆರಂಭಿಕ ತನಿಖೆ ಬಹಿರಂಗಪಡಿಸಿದೆ ಎಂದು ಎಸ್‌ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.
ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ಸಿಂಗ್ ಮತ್ತು ಮಿಶ್ರಾ ಇಬ್ಬರೂ ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌ಟಿಎಫ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿದೆ.
Comments are closed.