ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮೊದಲಾದವರು ಪಾಲ್ಗೊಂಡರು.

ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು.ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವಿಫಲರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಡಿಸಿಪಿಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು.
ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು.
ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಇದನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡಬೇಕು ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.
ಬಳಿಕ ಪೊಲೀಸ್ ಐಟಿ-ವಿ2, ಐಟಿಪಿಎ ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, ಸಿಜಿ ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು. ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.
Comments are closed.