ಕರಾವಳಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಮಾಜಿ ಸಚಿವ ಸಿ.ಟಿ ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

 

Comments are closed.