ಕರ್ನಾಟಕ

ಬೆಲೆ ಏರಿಕೆಗೆ ಖಂಡನೆ: ಬಿಜೆಪಿಯಿಂದ ಅಹೋರಾತ್ರಿ ಧರಣಿ- ಯಡಿಯೂರಪ್ಪ ಭಾಗಿ; ಸರ್ಕಾರದ ವಿರುದ್ಧ ಆಕ್ರೋಶ!

Pinterest LinkedIn Tumblr

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ನಗರ ಫ್ರೀಡಂ ಪಾರ್ಕ್’ನಲ್ಲಿ ಬುಧವಾರ ಅಹೋರಾತ್ರಿ ಧರಣಿ ನಡೆಸಿದ್ದು, ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಿದ್ದಾರೆ.

ರಾಜ್ಯ ಬಿಜೆಪಿ ಬುಧವಾರ ಮಧ್ಯಾಹ್ನದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ. ಬಳಿಕ ಇದೇ ತಿಂಗಳ 5ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಲಿದೆ. ಬಳಿಕ 7ರಿಂದ ಬೆಲೆ ಏರಿಕೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿಯು ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

ಧರಣಿ ನೇತೃತ್ವ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಸರ್ಕಾರ ವಿವಿಧ ತೆರಿಗೆಗಳು ಮತ್ತು ಸರಕುಗಳ ಬೆಲೆಗಳನ್ನು ಹೆಚ್ಚಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವವರೆಗೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಮತ್ತು ಯಾವುದೇ ನೀರಾವರಿ ಕಾರ್ಯಗಳನ್ನು ಕೈಗೆತ್ತಿಕೊಂಡಿಲ್ಲ. ಅಭಿವೃದ್ಧಿ ಕಾರ್ಯಗಳ ಬದಲು ಸರ್ಕಾರ ಸರಕುಗಳ ಬೆಲೆ ಹೆಚ್ಚಿಸುವಲ್ಲಿ ನಿರತರಾಗಿದ್ದಾರೆ. ಈ ಮೂಲಕ ಸಾರ್ವಜನಿಕರ ಕೋಪಕ್ಕೆ ಗುರಿಯಾಗಿದ್ದಾರೆ. ಈ ಸರ್ಕಾರಕ್ಕೆ ಅಧಿಕಾರದಲ್ಲಿರಲು ಯಾವುದೇ ನೈತಿಕ ಹಕ್ಕಿಲ್ಲ” ಎಂದು ಕಿಡಿಕಾರಿದರು.

ಇದೇ ವೇಳೆ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ತಿಳಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿಯೂ ತಿಳಿಸಿದರು.

Comments are closed.