ಕರಾವಳಿ

ಮಣಿಪಾಲದ ಟೈಗರ್‌ ಸರ್ಕಲ್‌ನ ಖಾಸಗಿ ಬಸ್‌ ನಿಲ್ದಾಣದ ಬಳಿ ಗಲಾಟೆ ಮಾಡಿದ ಚಾಲಕ, ಕಂಡಕ್ಟರ್ ಬಂಧನ 

Pinterest LinkedIn Tumblr

ಉಡುಪಿ: ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಎರಡು ಬಸ್ಸುಗಳ ಚಾಲಕ ಹಾಗೂ ನಿರ್ವಾಹಕನ ನಡುವೆ ಗಲಾಟೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು ಬಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಎ.2 ರಂದು ಸಂಜೆ ಈ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗಳಾದ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಆನಂದ ಬಸ್ಸಿನ ನಿರ್ವಾಹಕ ವಿಜಯಕುಮಾರ್‌(25) ಎನ್ನುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಸ್‌ಗಳನ್ನು ವಶ ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಠಾಣಾ ಪ್ರಕರಣಗಳು ದಾಖಲಾಗಿವೆ.

Comments are closed.