ಕರಾವಳಿ

ಕಾರಿನೊಳಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ | ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಘಟನೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರಿನೊಳಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಘಟನೆ ನಡೆದಿದೆ. ದಿಲೀಪ್‌ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಆಗಿರಬಹುದು ಎಂದು ಶಂಕಿಸಲಾಗಿದೆ.

ಕುಟುಂಬದ ಜೊತೆ ಮಂಗಳೂರಿನಲ್ಲಿ ಉದ್ಯಮಿ ವಾಸವಾಗಿದ್ದರು. ಕಳೆದ ತಡರಾತ್ರಿ, ಬೆಳಗಿನ ಜಾವ ಘಟನೆ ನಡೆದಿದೆ. ಕಾರಿನಲ್ಲಿ ರಿವಾಲ್ವರ್ ಪತ್ತೆಯಾಗಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

Comments are closed.