ಕರ್ನಾಟಕ

ಪಾಕ್ ಮೇಲೆ ದಾಳಿಗೆ ಭಾರತ ಸನ್ನದ್ಧ; ಮೇ 7ರಂದು ಮಾಕ್​​ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

Pinterest LinkedIn Tumblr

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮೇ 7 ರಂದು ಮಾಕ್​​ ಡ್ರಿಲ್ ನಡೆಸುವಂತೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಹಲವು ರಾಜ್ಯಗಳಿಗೆ ಸೂಚಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಮತ್ತು “ಪ್ರತಿಕೂಲ ದಾಳಿ”ಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರಿಣಾಮಕಾರಿ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.

ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಸಿದ್ಧತೆಯನ್ನು ಪರೀಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಮೇ 7ರ ಬುಧವಾರ ಸಮಗ್ರ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸುವಂತೆ ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕ್ರ್ಯಾಶ್ ಬ್ಲ್ಯಾಕೌಟ್ ಕ್ರಮಗಳನ್ನು ಒದಗಿಸಬೇಕು, ಪ್ರಮುಖ ಸ್ಥಾವರಗಳು ಮತ್ತು ಪ್ರಮುಖ ಕಟ್ಟಡಗಳನ್ನು ಮರೆಮಾಚುವಿಕೆ ಮತ್ತು ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ನಡೆಸುವ ಬಗ್ಗೆ ಪೂರ್ವಾಭ್ಯಾಸ ಮಾಡಬೇಕು.

Comments are closed.