ತೀರ್ಥಹಳ್ಳಿ: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ-1’ ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲಿದ್ದು ಕಳೆದೆರಡು ದಿನಗಳ ಹಿಂದೆ ಸಹಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಚಿತ್ರೀಕರಣದ ವೇಳೆ ದೋಣಿ ಮಗುಚಿ ಬಿದ್ದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ‘ಕಾಂತಾರ’-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ಶನಿವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದ್ದು, ಒಂದರ ಹಿಂದೆ ಒಂದರಂತೆ ಚಿತ್ರತಂಡಕ್ಕೆ ಕೆಟ್ಟ ಅನುಭವದ ಘಟನೆಗಳು ನಡೆಯುತ್ತದೆ.
Comments are closed.