ಉಡುಪಿ: ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 3 ಕೆಜಿ 138 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 32,800/ಲ ಬೆಲೆಯ ಗಾಂಜಾ, 2 ಲಕ್ಷ ಮೌಲ್ಯದ 36 ಗ್ರಾಂ 259 ಮಿಲಿಗ್ರಾಂ ಎಂ.ಡಿ.ಎಂ.ಎ ಹಾಗೂ 1,47,200 ರೂಪಾಯಿ ಅಂದಾಜು ಮೌಲ್ಯದ 368 ಗ್ರಾಂ ಅಫೀಮನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ. ಲಿ. ಪಡುಬಿದ್ರೆ ಎಂಬಲ್ಲಿ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷ ಹರಿರಾಮ್ ಶಂಕರ್, ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ. ಹರ್ಷಾ ಪ್ರಿಯಂವದಾ ಮತ್ತು ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್ ಅಧಿಕಾರಿಯವರು ಮತ್ತು ಮೆ. ಆಯುಷ್ ಎನ್ವಿರೋಟೆಕ್ ಪ್ರೈ.ಲಿ. ಪಡುಬಿದ್ರಿಯ ಅಧಿಕಾರಿಯವರು ಉಪಸ್ಥಿತರಿದ್ದರು.
Comments are closed.