ಕುಂದಾಪುರ: ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.

ಮರವಂತೆಯ ನಿವಾಸಿ ಲಕ್ಷ್ಮಣ ಪೂಜಾರಿ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರವಂತೆಯಿಂದ ಪಶ್ಚಿಮ ದಿಕ್ಕಿನಿಂದ ಇಲ್ಲಿನ ಬಸ್ ನಿಲ್ದಾಣದ ಸಮೀಪ ಲಕ್ಷ್ಮಣ ಪೂಜಾರಿ ತಮ್ಮ ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಲಕ್ಷ್ಮಣ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಂಗೊಳ್ಳಿ ಪೊಲೀಸ್ ಅಪರಾಧ ವಿಭಾಗದ ಉಪನಿರೀಕ್ಷಕ ಬಸವರಾಜ್ ಕನಶೆಟ್ಟಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.