ಕುಂದಾಪುರ: ಕಳೆದ ಮೂರು ವರ್ಷಗಳಿಂದ ಕುಂದಾಪುರದಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಪ್ರಸಾದ್ ಕುಮಾರ್ ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ಈ ಹಿಂದೆ ನಗರ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಅವರು ಪ್ರಸ್ತುತ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪಿಎಸೈ ಆಗಿದ್ದು ಜನಸ್ನೇಹಿ ಕಾರ್ಯಗಳ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೂತನ್ ಡಿ. ಅವರನ್ನು ನೇಮಿಸಿ ಇಲಾಖೆ ಆದೇಶಿಸಿದ್ದು ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ನೂತನ್ ಡಿ. ಅವರು ಈ ಹಿಂದೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್ಐ ಆಗಿದ್ದರು. ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಪಾಲನೆಗೆ ಒತ್ತು ನೀಡಲಾಗುತ್ತದೆ. ಅಗತ್ಯ ಕಡೆ ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪಿಎಸ್ಐ ನೂತನ್ ಹೇಳಿದರು.
Comments are closed.