ಕರಾವಳಿ

ಸಿದ್ಧಾಪುರದ ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ, ಕ್ಲಬ್‌ಗಳ ಉದ್ಘಾಟನೆ

Pinterest LinkedIn Tumblr

ಕುಂದಾಪುರ: ಸುಮುಖ ಎಜ್ಯುಕೇಶನಲ್ ಟ್ರಸ್ಟ್ ಪ್ರವರ್ತಿತ ಸಿದ್ದಾಪುರದಲ್ಲಿರುವ ಸರಸ್ವತಿ ವಿದ್ಯಾಲಯಲ್ಲಿ ಗುರುವಾರ ಶಾಲಾ ವಿದ್ಯಾರ್ಥಿಗಳ ಸಂಸತ್ ಪದಗ್ರಹಣ ಮತ್ತು  ವಿವಿಧ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಮುಖ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಶಾಲೆಗಳಲ್ಲಿ ನಡೆಯುವ ಸಂಸತ್ ಪ್ರಕ್ರಿಯೆ ಅತೀ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದರು. ಶಿಕ್ಷಣದ ಜೊತೆಗೆ ಸಾಮಾಜಿಕ ಕಳಕಳಿಯಿದ್ದಾಗ ಮಕ್ಕಳು ಪ್ರಬುದ್ಧತೆ ಸಾಧಿಸಲು ಸಾಧ್ಯ ಎಂದರು.

ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಶಾಲಾ ಮುಖ್ಯೋಪಾಧ್ಯಾಯನಿ ಶ್ವೇತಾ ಉಪಸ್ಥಿತರಿದ್ದರು. ಶಿಕ್ಷಕಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸುಮಂತ್ ಸ್ವಾಗತಿಸಿ, ಶಿಕ್ಷಕಿ  ವಿದ್ಯಾಶ್ರೀ ವಂದಿಸಿದರು.

Comments are closed.