ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್ಎನ್ ಚನ್ನಬಸಪ್ಪ, ಡಿಎಸ್ ಅರುಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಾಗರ ತಾಲ್ಲೂಕಿನ ಅಂಬರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಈ ಸೇತುವೆಯನ್ನು 472 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಸೇತುವೆಯು 2.44 ಕಿಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. ಈ ಸೇತುವೆಯು ಸಾಗರದಿಂದ ಸಿಗಂದೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ದೂರವನ್ನು ಕಡಿಮೆ ಮಾಡುತ್ತದೆ.
Comments are closed.