ಕುಂದಾಪುರ: ಯುವ ಕಾಂಗ್ರೆಸ್ ಕುಂದಾಪುರ ವತಿಯಿಂದ ಮನೆ ಮನೆಗೆ ಗ್ಯಾರಂಟಿ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಂ.ಎಸ್ ಮೊಹಮ್ಮದ್, ಸುಭಾಷ್ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ ಕಾಳಾವರ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ ಶೆಟ್ಟಿ, ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ ಹೇರಿಕುದ್ರು, ಕೋಟ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರವೀಂದ್ರ ನಾಯ್ಕ್, ಸುಮನ್ ಶೆಟ್ಟಿ ಆವರ್ಸೆ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.