ಕರಾವಳಿ

ಕುಂದಾಪುರದ ರಿಂಗ್ ರಸ್ತೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಶಾಸಕ ಎ. ಕಿರಣ್ ಕೊಡ್ಗಿ

Pinterest LinkedIn Tumblr

ಕುಂದಾಪುರ: ಇಲ್ಲಿನ ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ಧಿ ಕಾರ್ಯವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರುವೀಕ್ಷಿಸಿ ಕೆಲವೊಂದು ಕಾಮಗಾರಿಯ ನ್ಯೂನ್ಯತೆಗಳ ಬಗ್ಗೆ ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಶೀಘ್ರದಲ್ಲಿ ಉತ್ತಮ ರಿಂಗ್ ರೋಡ್ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಮುಖ್ಯಾಧಿಕಾರಿ ಆನಂದ ಜೆ., ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ಚಂದ್ರಶೇಖರ್ ಖಾರ್ವಿ, ಪಿಡಬ್ಲ್ಯೂಡಿ ಇಂಜಿನಿಯರ್ ರಾಮಣ್ಣಗೌಡ, ಮೆಸ್ಕಾಂ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ರಾಘವೇಂದ್ರ ಇನ್ನಿತರರು ಉಪಸ್ಥಿತರಿದ್ದರು.

Comments are closed.