ಕರ್ನಾಟಕ

ಕರ್ನಾಟಕ ಪೊಲೀಸ್​​​​ ಕಾನ್ಸ್‌ಟೇಬಲ್‌ಗಳ ಟೋಪಿ ಬದಲಾವಣೆ: ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್ ಕ್ಯಾಪ್​​​​!

Pinterest LinkedIn Tumblr

ಬೆಂಗಳೂರು: ಇಂದಿನಿಂದ (ಅ.28) ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಕಾನ್‌ಸ್ಟೆಬಲ್‌ಗಳು ಮತ್ತು ಹೆಡ್ ಕಾನ್‌ಸ್ಟೆಬಲ್‌ಗಳಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು (ಪಿ-ಸಿಎಪಿ) ವಿತರಿಸಲಿದ್ದು ಹಲವಾರು ವರ್ಷಗಳಿಂದ ಪೊಲೀಸರು ಧರಿಸುವ ಸ್ಲೌಚ್ ಟೋಪಿಗಳನ್ನು ಬದಲಾಯಿಸಲಾಗುತ್ತಿದೆ.

ಪೊಲೀಸ್ ಸಿಬ್ಬಂದಿಗೆ ಇಂದು (ಅಕ್ಟೋಬರ್ 28) ಪಿ-ಕ್ಯಾಪ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಡಿಜಿ ಮತ್ತು ಐಜಿಪಿ ಎಂಎ ಸಲೀಂ ಗುರುವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಪೊಲೀಸ್ ಕಮಿಷನರೇಟ್‌ಗಳು ಮತ್ತು ಜಿಲ್ಲೆಗಳು ಈ ಕಾರ್ಯಕ್ರಮಕ್ಕೆ ಹಾಜರಾಗಲು ತಲಾ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ (ಪಿಸಿ) ಅಥವಾ ಹೆಡ್ ಕಾನ್‌ಸ್ಟೆಬಲ್ (ಎಚ್‌ಸಿ) ಅವರನ್ನು ನಾಮನಿರ್ದೇಶನ ಮಾಡುವಂತೆ ಸೂಚಿಸಿದ್ದಾರೆ. ಆಗಸ್ಟ್ 6 ರಂದು ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ಬಳಸುತ್ತಿರುವ ಸ್ಲೌಚ್ ಟೋಪಿಗಳನ್ನು ನೇವಿ ಬ್ಲೂ ಪೀಕ್ ಕ್ಯಾಪ್‌ಗಳೊಂದಿಗೆ ಬದಲಾಯಿಸುವ ಆದೇಶಗಳನ್ನು ಹೊರಡಿಸಿತ್ತು.

Comments are closed.