ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಮಾತನಾಡಿದರು.

ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸುವ ಛಲ ಬೇಕಷ್ಟೆ ಎಂದವರು ಹೇಳಿದರು.
ಸರಕಾರವು ಕೆಲ ತಿಂಗಳ ಹಿಂದೆ ನಿಯೋಜಿಸಿ ಆದೇಶಿಸಿದ್ದ ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಕೆ. ಅವರನ್ನು ಉದ್ದೇಶಿಸಿ ಪೊಲೀಸ್ ಇಲಾಖೆ ಕಾರ್ಯವನ್ನು ಸಿಎಂ ಪ್ರಶಂಸಿದ್ದಾರೆ.

Comments are closed.