ಕರಾವಳಿ

ಇಂಪನಾ ಆರ್. ಅವರಿಗೆ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯ ಝಡ್-ಎಕ್ಸ್ ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ

Pinterest LinkedIn Tumblr

ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ-2025 ಅ. 26ರಂದು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಕುಂದಾಪುರದ ಇಂಪನಾ ಆರ್. ಅವರು ಝಡ್-ಎಕ್ಸ್ ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿಜಯಿಯಾಗಿದ್ದಾರೆ.

ಇಂಪನಾ ಕುಂದಾಪುರದ ನಿವಾಸಿಯಾಗಿದ್ದು, ದೀಪಿಕಾ ಜಿ. ಮತ್ತು ರಾಘವೇಂದ್ರ ಶೇರೆಗಾರ್ ಅವರ ಪುತ್ರಿಯಾಗಿದ್ದಾರೆ. ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆ.ಬಿ. ಅವರಿಂದ ತರಬೇತಿ ಪಡೆದಿದ್ದು ಶಿಕ್ಷಕರಾದ ಮಹಾಲಕ್ಷ್ಮಿ ಮತ್ತು ದೀಪಾ ಮಾರ್ಗದರ್ಶನ ನೀಡಿದ್ದಾರೆ. ಪ್ರಸ್ತುತ ಇಂಪನಾ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Comments are closed.