ಕರಾವಳಿ

ಡಿಜಿಟಲ್ ಅರೆಸ್ಟ್ ವಂಚನೆ ತಡೆದು 17 ಲಕ್ಷ ಉಳಿಸಿದ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿ, ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Pinterest LinkedIn Tumblr

ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಿದರು.

ಹಿರಿಯ ನಾಗರಿಕರ ಹಣವನ್ನು ವಂಚಕರಿಂದ ಕಾಪಾಡಿದ ಈ ಸಾಹಸಾತ್ಮಕ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದ ಸಚಿವೆ ಹೆಬ್ಬಾಳಕರ್, ಶನಿವಾರ ಬೆಳಗಿನ ಜಾವ ಉಡುಪಿಯ ಗೃಹಕಚೇರಿಯಲ್ಲಿ ದಿನಪತ್ರಿಕೆ ವೀಕ್ಷಿಸುವ ವೇಳೆ, ಮಂಗಳೂರಿನ ಬಿಜೈಯ ಪ್ರದೇಶದ ಹಿರಿಯ ನಾಗರಿಕ ಮಹಿಳೆಯೊಬ್ಬರ ಮೇಲೆ ನಡೆದ ಡಿಜಿಟಲ್ ವಂಚನೆ ಯತ್ನವನ್ನು ಮಂಗಳೂರು ಪೊಲೀಸ್ ಇಲಾಖೆಯು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ತಡೆದು, ಸುಮಾರು 17 ಲಕ್ಷ ರೂ. ರಕ್ಷಿಸಿದ ಘಟನೆಯ ಕುರಿತು ತಿಳಿಯಿತು. ಈ ಹಿನ್ನೆಲೆಯಲ್ಲಿ ಡಿಸಿಪಿ ಅಧಿಕಾರಿಗಳಾದ ಮಿಥುನ್ ಮತ್ತು ರವಿಶಂಕರ್ ಅವರನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಆಹ್ವಾನಿಸಿ, ಅವರ ಸಮಯೋಚಿತ ಹಾಗೂ ಪರಿಣಾಮಕಾರಿಯಾದ ಕಾರ್ಯಪದ್ಧತಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಪಸ್ಥಿತರಿದ್ದರು.

Comments are closed.