ಕರಾವಳಿ

ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ ಹೃದಯಾಘಾತದಿಂದ ನಿಧನ

Pinterest LinkedIn Tumblr

ಉಡುಪಿ: ಇಲ್ಲಿನ ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ(ಎಎಸ್‌ಐ) 56 ವರ್ಷ ಪ್ರಾಯದ ವಿಶ್ವನಾಥ್ ಎಂಬವರು ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಲ್ಪೆ ಪೊಲೀಸ್‌ ಠಾಣೆಯ ಸಿಬ್ಬಂದಿಯೊಬ್ಬರಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಭಾಗವಹಿಸಿದ್ದು ಈ ವೇಳೆ ಆರೋಗ್ಯದಲ್ಲಿ ಏರಪೇರಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಮಲ್ಪೆ ಪೊಲೀಸ್‌ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು ಎಂದು ತಿಳಿದುಬಂದಿದೆ.

Comments are closed.