ಕರ್ನಾಟಕ

ಮಾಜಿ ಸಚಿವ, ಕಾಂಗ್ರೆಸ್ ಹಾಲಿ ಶಾಸಕ ಹೆಚ್.ವೈ ಮೇಟಿ ನಿಧನ

Pinterest LinkedIn Tumblr

ಬೆಂಗಳೂರು: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ ಇಂದು ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದ ಕಾರಣ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ  ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಹೆಚ್.ವೈ. ಮೇಟಿ ( ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.

ಈ ಹಿಂದೆ 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು.

Comments are closed.