ಮುಂಬಯಿ: ಮುಲ್ಕಿ ಹಳೆಯಂಗಡಿ ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವ ಮಾರ್ಚ್ 4 ರಿಂದ 8 ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ನ. 9 ರಂದು ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀಪತಿ ಭಟ್ ಹೊಯ್ಕೆಗುಡ್ಡೆ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಕ್ಷೇತ್ರದ ಅರ್ಚಕ ಹಾಗೂ ಅನುವಂಶಿಕ ಮೊಕೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಮುಷ್ಟಿ ಕಾಣಿಕೆಗೆ ಚಾಲನೆ ನೀಡಿದರು.
ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮುಂಬಯಿಯ ನ್ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ, ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಆಡಳಿತ ಸಮಿತಿಯ ಅಧ್ಯಕ್ಷ ವಾಮನ್ ಇಡ್ಯಾ, ಮುಂಬಯಿಯ ಉದ್ಯಮಿ ಧರ್ಮಪಾಲ ದೇವಾಡಿಗ, ಬ್ರಹ್ಮಕಲಶೋತ್ಸವ ಮುಂಬಯಿ ಸಮಿತಿಯ ಅಧ್ಯಕ್ಷ ವೇದಪ್ರಕಾಶ್ ಎಂ ಶ್ರೀಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಪೂಜಾರಿ,ಹಳೆಯಂಗಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ, ಉದ್ಯಮಿ ಸುನೀಲ್ ಪಾಯಸ್ ಮಂಗಳೂರು ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಕುಮಾರ್ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.
ವರದಿ: ಈಶ್ವರ ಎಂ. ಐಲ್
Comments are closed.