ಕರ್ನಾಟಕ

ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣ

Pinterest LinkedIn Tumblr

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Comments are closed.