ಕರಾವಳಿ

ಕಾಪು: ಗೂಡ್ಸ್ ಟೆಂಪೋ ಪಲ್ಟಿಯಾಗಿ 5 ಮಂದಿ ದುರ್ಮರಣ, ಹಲವರಿಗೆ ಗಾಯ

Pinterest LinkedIn Tumblr

ಉಡುಪಿ: ಗೂಡ್ಸ್‌ ಟೆಂಪೋವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಐವರು ಮೃತಪಟ್ಟ ಘಟನೆ ಕಾಪು ಸಮೀಪದ ಉಳಿಯಾರಗೋಳಿ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಭಾನುವಾರ ಸಂಭವಿಸಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕೊರೇಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದುಬಂದಿದೆ.

ಕಮಲ, ಸಮರೇಶ, ಗಪ್ಪುನಾಥ, ಪಪ್ಪು ಮತ್ತು ಹರೀಶ್ ಮೃತರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಟೆಂಪೋದಲ್ಲಿ ಚಾಲಕ ಸಹಿತ 10-11 ಮಂದಿ ಕೆಲಸಗಾರರು ಪ್ರಯಾಣಿಸುತ್ತಿದ್ದು ಐವರು ಮೃತಪಟ್ಟು ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿದ್ದ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.

ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.