ಬೆಂಗಳೂರು: ಉಪಾಹಾರ ಕೂಟಕ್ಕೆ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆದರದಿಂದ ಸ್ವಾಗತಿಸಿದ್ದು ಬಳಿಕ ಇಬ್ಬರು ನಾಯಕರು ಉಪಹಾರ ಸೇವಿಸಿದರು.
ತಮ್ಮ ಮಧ್ಯೆ ಯಾವುದೇ ಭಿನ್ನಮತ ಇಲ್ಲ ಎಂದು ಬಿಂಬಿಸಲು ಉಪಾಹಾರ ಕೂಟ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಂದು ಉಪಾಹಾರ ಕೂಟದಲ್ಲಿ ಜತೆ ಸೇರಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
Comments are closed.