ಕುಂದಾಪುರ: ಕೋಟೇಶ್ವರ ಪಂಚಾಯತ್‌ಗೆ ಸೇರಿದ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಭಾನುವಾರ ನಸುಕಿನ ವೇಳೆ ಕೋಟೇಶ್ವರದಲ್ಲಿ ನಡೆದಿದೆ.

ಗ್ರಾಮಪಂಚಾಯತ್ ಹಿಂಬದಿಯಲ್ಲಿ (ಹಳೆ ಗ್ರಾ.ಪಂ ಕಟ್ಟಡ) ಕಳೆದ ನಾಲ್ಕೈದು ವರ್ಷದಿಂದ ಎಸ್.ಎಲ್.ಆರ್.ಎಂ ಘಟಕ ಕಾರ್ಯಾಚರಿಸುತ್ತಿದ್ದು ಇದರ ಕೆಳಭಾಗ, ಆಸುಪಾಸಿನಲ್ಲಿ ವಾಣಿಜ್ಯ ಕಟ್ಟಡಗಳಿದೆ. ಮೇಲ್ಭಾಗದಲ್ಲಿ ಒಣ ತ್ಯಾಜ್ಯ ಘಟಕವಿದ್ದು ಅಲ್ಲಿ ಶೇಖರಣೆ ಮಾಡಿಟ್ಟಿದ್ದ ಒಣ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ತಗಲಿ ಒಣ ತ್ಯಾಜ್ಯಗಳು, ಯಂತ್ರೋಪಕರಣ, ತಗಡಿನ ಶೀಟುಗಳು ಬೆಂಕಿಗೆ ಆಹುತಿಯಾಗಿದೆ. ವಾಣಿಜ್ಯ ಸಂಕಿರ್ಣದ ಕಟ್ಟಡದಲ್ಲಿದ್ದ ತರಕಾರಿ ಅಂಗಡಿ ಸಹಿತ ಒಂದಷ್ಟು ಅಂಗಡಿಗಳ ಪರಿಕರಗಳಿಗೆ ಹಾನಿಯಾಗಿದೆ.
ಬೆಳಿಗ್ಗೆ ಅಯ್ಯಪ್ಪ ವೃತಧಾರಿಗಳು ಬೆಂಕಿ ಕಂಡು ಸಂಬಂದಪಟ್ಟವರಿಗೆ ಮಾಹಿತಿ ನೀಡಿದ್ದು ಅಗ್ನಿಶಾಮಕಕ್ಕೆ ಫೋನಾಯಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿ ಕುಂದಾಪುರ ಹಾಗೂ ಬೈಂದೂರು ಅಗ್ನಿಶಾಮಕ ದಳದವರು ಏಳೆಂಟು ಬಾರಿ ನೀರು ಹಾಯಿಸಿ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Comments are closed.