ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೆದ್ದಾರಿ 48 ರ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 17ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕಂಟೈನರ್ ವಾಹನವು ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಅಪ್ಪಳಿಸಿದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಬಸ್‌ಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಇನ್ನುಳಿದವರಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಒಂದು ಕಡೆಯಿಂದ ಬರುತ್ತಿದ್ದ ಕಂಟೈನರ್, ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಬಸ್ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪ್ಪಳಿಸುವಿಕೆಯಿಂದಾಗಿ ಸ್ಲೀಪರ್ ಕೋಚ್ ಬಸ್ ರಸ್ತೆಯ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.

Comments are closed.