Uncategorized

ಸಂಸದ ಕ್ಯಾ. ಬ್ರಿಜೇಶ್‌ ಚೌಟರ ನೇತೃತ್ವದ 9ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ : 9 ಮಂದಿ ‘ಬ್ಯಾಕ್ ಟು ಊರು’ ಉದ್ಯಮಿಗಳಿಗೆ ವಿಶೇಷ ಸನ್ಮಾನ

Pinterest LinkedIn Tumblr

ಮಂಗಳೂರು: ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ದ.ಕ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ನೇತ್ರತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ಉದ್ಘಾಟನೆಗೊಂಡಿತು.

ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇಶ ವಿದೇಶದ ಮಕ್ಕಳಿಗೆ ತುಳುನಾಡಿನ ಸಂಸ್ಕೃತಿಯ ಪರಿಚಯ ಆಗಬೇಕು ಎಂಬ ನಿಟ್ಟಿನಲ್ಲಿ ಪ್ರಾರಂಭಗೊಂಡ ಕಂಬಳಕ್ಕೆ ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಮೊಕ್ತೇಸರರಾದ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಶಾಸಕರು, ಸಾಮಾಜಿಕ, ರಾಜಕೀಯ ನೇತಾರರು, ಉದ್ಯಮಿಗಳು ಸೇರಿದಂತೆ ಹಲವಾರು ಅಥಿತಿಗಳು ಸಮಾರಂಭದಲ್ಲಿ ಪಾಲ್ಗೊಂಡರು.

ಮಂಗಳೂರು ಕಂಬಳ ಕ್ರಿಯೇಟ್ ಮಾಡುವ ಸ್ಪರ್ಧೆಗಳು :

ಮಂಗಳೂರು ನಗರದಲ್ಲಿರುವ ವ್ಯದ್ಯಾಶ್ರಮದ ಹಿರಿಯ ಜೀವಗಳಿಗೆ ಕಂಬಳ ತೋರಿಸುವ ಕಾರ್ಯಕ್ರಮ, ಪೇಂಟಿಂಗ್, ರೀಲ್ಸ್ ಸ್ಪರ್ಧೆ, ಫೋಟೋಗ್ರಾಫಿ, Al ಮುಖಾಂತರ ಮಂಗಳೂರು ಕಂಬಳ ಕ್ರಿಯೇಟ್ ಮಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮಕ್ಕಳು, ಹಿರಿಯರು, ಯುವಕರು ಹೀಗೆ ಎಲ್ಲರನ್ನೂ ಸೇರಿಸಿಕೊಂಡು ಕಂಬಳವನ್ನು ಸದಾಕಾಲ ನೆನಪಲ್ಲಿ ಉಳಿಸುವ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತು.

9 ಮಂದಿ ‘ಬ್ಯಾಕ್ ಟು ಊರು’ ಉದ್ಯಮಿಗಳಿಗೆ ವಿಶೇಷ ಸನ್ಮಾನ :

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನೇತೃತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ನಡೆದ 9ನೇ ವರ್ಷದ ಮಂಗಳೂರು ಕಂಬಳದಲ್ಲಿ ಬ್ಯಾಕ್‌ ಟು ಊರು ಪರಿಕಲ್ಪನೆಯಡಿ ತಾಯ್ನಾಡಿಗೆ ವಾಪಾಸ್ಸಾಗಿ ಉದ್ಯಮ ಸ್ಥಾಪಿಸಿರುವ ನವ ಉದ್ಯಮಿಗಳನ್ನು ಸನ್ಮಾನಿಸಲಾಯಿತು.

ಈ ಬಾರಿ “ನವ ವಿಧ-ನವ ವರ್ಷ”ದ ಮಂಗಳೂರು ಕಂಬಳ ಆಗಿರುವ ಹಿನ್ನಲೆಯಲ್ಲಿ ತಮ್ಮ ತಾಯ್ನಾಡಿನ ಬಗೆಗಿನ ಅಪಾರ ಪ್ರೀತಿ ಮತ್ತು ಗೌರವದಿಂದ ಊರಿಗೆ ಮರಳಿ ಈ ನಮ್ಮ ತುಳುನಾಡಿನ ಮಣ್ಣಿನಲ್ಲೇ ಉದ್ಯಮವನ್ನು ಕಟ್ಟಿ ಬೆಳೆಸಿರುವ ನವ ಸಾಧಕ ಉದ್ಯಮಿಗಳನ್ನು ಗುರುತಿಸಿ ಅವರ ಕೊಡುಗೆಯನ್ನು ಶ್ಲಾಘಿಸಲಾಗುವುದು. ಆ ಮೂಲಕ ನಮ್ಮ ತುಳುನಾಡಿನ ಶ್ರೀಮಂತ ಜನಪದ ಕ್ರೀಡೆಯಾದ ಕಂಬಳದ ವೇದಿಕೆಯಲ್ಲೇ ಈ ಬ್ಯಾಕ್‌ ಟು ಊರು ಉದ್ದಿಮೆದಾರರನ್ನು ಸನ್ಮಾನಿಸುವ ಅತ್ಯಂತ ಅವಿಸ್ಮರಣೀಯ ಕ್ಷಣಕ್ಕೆ ಈ ಬಾರಿಯ ಮಂಗಳೂರು ಕಂಬಳ ಸಾಕ್ಷಿಯಾಯಿತು.

Comments are closed.