ಉಡುಪಿ: ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ.ಯು. ಅವರನ್ನು ಕಾರ್ಕಳ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಆಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಕಾರ್ಕಳದ ಎಎಸ್ಪಿಯಾಗಿದ್ದ ಡಾ. ಹರ್ಷಪ್ರಿಯವಂದ ಅವರಿಗೆ ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ಬಡ್ತಿ ನೀಡಿ ವರ್ಗಾಯಿಸಿದ ಹಿನ್ನೆಲೆ ಉಪವಿಭಾಗದ ಡಿವೈಎಸ್ಪಿ ಆಗಿ ಬೆಳ್ಳಿಯಪ್ಪ ಅವರನ್ನು ನೇಮಿಸಲಾಗಿದೆ.
ಬೆಳ್ಳಿಯಪ್ಪ ಅವರು ಈ ಹಿಂದೆ ಕುಂದಾಪುರ ಉಪವಿಭಾಗದಲ್ಲಿ ಡಿವೈಎಸ್ಪಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ಜಿಲ್ಲೆಯ ಬಹಳಷ್ಟು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ತನಿಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
Comments are closed.