ಕರಾವಳಿ

ಕಾರ್ಕಳ: ಸ್ಫೋಟಕ ಬಳಸಿ ಅಕ್ರಮ ಬಂಡೆ ಸ್ಫೋಟ ಪ್ರಕರಣ; ಆರೋಪಿಗಳಾದ ತಂದೆ-ಮಗನ ಬಂಧನ

Pinterest LinkedIn Tumblr

ಉಡುಪಿ: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕುಕ್ಕುಂದೂರು ಗ್ರಾಮ ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾ‌ರ್ (31) ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಜ.21ರಂದು ಪ್ರಕರಣ ದಾಖಲಾಗಿತ್ತು.

ಅದರಂತೆ ತನಿಖೆಯನ್ನು ಕೈಗೊಂಡ ಕಾರ್ಕಳ ನಗರ ಪೊಲೀಸ್‌ ಠಾಣಾ ಪಿಎಸ್‌ಐ ಮುರುಳೀಧರ ನಾಯ್ಕ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Comments are closed.