ಕರಾವಳಿ

ಯೋಗೀಶ ಗೌಡ ಕೊಲೆ ಪ್ರಕರಣದ ಅಪರಾಧಿ, ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

Pinterest LinkedIn Tumblr

ಬೆಂಗಳೂರು: ಯೋಗೀಶಗೌಡ ಗೌಡ ಅವರ ಕೊಲೆ ಪ್ರಕರಣದಲ್ಲಿ ಪ್ರಕರಣದ ಅಪರಾಧಿ, 15ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.

ಶುಕ್ರವಾರ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

ಪ್ರಕಣದಲ್ಲಿನ 19 ಅಪರಾಧಿಗಳ ಪೈಕಿ 16 ಅಪರಾಧಿಗಳೆಲ್ಲರಿಗೂ ಜೀವಾವಧಿ ಶಿಕ್ಷೆಯನ್ನು ನೀಡಿ ಆದೇಶಿಸಲಾಗಿದೆ. 2016 ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ್ ಕೊಲೆ ನಡೆದಿತ್ತು. 2019ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕ್ಕೊಂಡಿತ್ತು.

ಪ್ರಕರಣದಲ್ಲಿನ 17 ಆರೋಪಿಗಳನ್ನು ಅಪರಾಧಿಗಳು ಎಂದು ಬುಧವಾರ ನಿರ್ಣಯಿಸಿದ್ದ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು, ಶುಕ್ರವಾರ ಶಿಕ್ಷೆಯ ಪ್ರಮಾಣ ನಿರ್ಧರಿಸಿ ಘೋಷಿಸಿದರು.

ಶಿಕ್ಷೆಯ ಪ್ರಮಾಣ ನಿರ್ಧರಿಸುವ ಕುರಿತು ಗುರುವಾರ ನಡೆದ ವಿಚಾರಣೆಯಲ್ಲಿ ಕಾನೂನಿನ ತತ್ವಗಳಿಗೆ ಅನುಗುಣವಾಗಿ ಗರಿಷ್ಠ ಶಿಕ್ಷೆಗೆ ವಿನಾಯ್ತಿ ಕೋರುವ ಅಪರಾಧಿಗಳ ಮನವಿಯನ್ನು ನ್ಯಾಯಾಧೀಶರು ಆಲಿಸಿದ್ದರು. ಅದರಂತೆ ಶುಕ್ರವಾರ ನ್ಯಾಯಾಲಯದಲ್ಲಿ ಎಲ್ಲಾ ಅಪರಾಧಿಗಳನ್ನೂ ಪೊಲೀಸರು ಹಾಜರುಪಡಿಸಿದರು. ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಯಿತು.

 

Comments are closed.